ರವಿವಾರ, 26 ಜನವರಿ 2020
5:30 ಪೂರ್ವಾಹ್ನ
Daily PDF
ಎಸ್.ಎಲ್. ಭೈರಪ್ಪ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿ
Authored by:
Surekha Halli
ಧಾರವಾಡ: ವರಕವಿ ಡಾ. ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿಂದ ಕೊಡಮಾಡುವ 2019-20ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.
ಈ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ಜ. 31ರಂದು ಸಂಜೆ ಐದು ಗಂಟೆಗೆ ಬೇಂದ್ರೆ ಭವನದಲ್ಲಿ ಪ್ರದಾನ ಮಾಡಲಾಗುವುದು.
ಸಾಹಿತಿ ಡಾ. ಗುರುಲಿಂಗ ಕಾಪಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ.ತೇಜಸ್ವಿ ಕಟ್ಟಿಮನಿ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದರು.
ಈ ಪ್ರಶಸ್ತಿ ಒಂದು ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ.