ರವಿವಾರ, 26 ಜನವರಿ 2020
5:30 ಪೂರ್ವಾಹ್ನ
Daily PDF
ರಾಷ್ಟ್ರೀಯ ಬಾಲ ಶಕ್ತಿ ಪುರಸ್ಕಾರ ಪಡೆದ ಕನ್ನಡದ ಮಕ್ಕಳು
Authored by:
Surekha Halli
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮೂಲದ ಮೂವರು ಮಕ್ಕಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ 49 ಮಕ್ಕಳಿಗೆ 'ಬಾಲ ಶಕ್ತಿ ಪುರಸ್ಕಾರ' 2020 ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಾಲಕಿ ಮೂರ್ಜೆ ಸುನಿತಾ ಪ್ರಭು ಶೈಕ್ಷಣಿಕ, ಬೆಂಗಳೂರಿನ ಪ್ರಗುನ್ ಪುದುಕೊಳಿ ಕಲೆ ಮತ್ತು ಸಂಸ್ಕೃತಿ ಮತ್ತು ಬೆಂಗಳೂರಿನ ಯಶ್ ಆರಾಧ್ಯಾ ಕ್ರೀಡಾ ವಿಭಾಗದಲ್ಲಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.