ರವಿವಾರ, 26 ಜನವರಿ 2020
5:30 ಪೂರ್ವಾಹ್ನ
Daily PDF
ನವಭಾರತ ನಿರ್ಮಾಣಕ್ಕೆ ಕರೆಕೊಟ್ಟ ರಾಷ್ಟ್ರಪತಿ ರಾಮನಾಥ್ ಕೋವಿಂದ್
Authored by:
Surekha Halli
ನವದೆಹಲಿ : ಭಾರತದಲ್ಲಿ 71ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡಿದ್ದಾರೆ.
ಎಲ್ಲ ಭಾರತೀಯ ಪ್ರಜೆಗಳಿಗೆ ರಾಷ್ಟ್ರಪತಿಗಳು ಗಣರಾಜ್ಯೋತ್ಸವದ ಶುಭಾಷಯ ತಿಳಿಸಿದ್ದಾರೆ.ಉಜ್ವಲ್ ಯೋಜನೆ, ಸ್ವಚ್ಛ ಭಾರತ್, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ಯೋಜನೆಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋನ ಸಾಧನೆಯನ್ನು ರಾಷ್ಟ್ರಪತಿ ಕೋವಿಂದ್ ಬಣ್ಣಿಸಿದ್ದಾರೆ.