ಮಂಗಳವಾರ, 28 ಜನವರಿ 2020
5:30 ಪೂರ್ವಾಹ್ನ
Daily PDF
ನಿರ್ಮಲಮ್ಮ ಅವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ
Authored by:
Surekha Halli
ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ವತಿಯಿಂದ ಈ ಸಾಲಿನ 'ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ'ಯನ್ನು ಚಕ್ರೇಶ್ವರಿ ಮಹಿಳಾ ಸಮಾಜದ ಅಧ್ಯಕ್ಷೆ ನಿರ್ಮಲಮ್ಮ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಮಿಳುನಾಡಿನ ಅರಹಂತಗಿರಿ ಜೈನ ಮಠದ ಧವಳಕೀರ್ತಿ ಭಟ್ಟಾಕರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ನಿರ್ಮಲಮ್ಮ ಅವರ ಧಾರ್ಮಿಕ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ನೀಡಲಾದ ಪ್ರಶಸ್ತಿ ₹25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.