ಮಂಗಳವಾರ, 28 ಜನವರಿ 2020
5:30 ಪೂರ್ವಾಹ್ನ
Daily PDF
ಏರ್ ಇಂಡಿಯಾ ಖಾಸಗಿಕರಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ
Authored by:
Basavaraj Halli
ನವದೆಹಲಿ,ಜ.27- ಸಾಲದ ಸುಳಿಗೆ ಸಿಲುಕಿರುವ ಸರ್ಕಾರಿ ಒಡೆತನದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖಾಸಗಿಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಿಯ ಮತ್ತು ಅಂತಾರಾಷ್ಟ್ರೀಯ ನೂರರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದೆ ಬಂದಿದೆ.
ಏರ್ ಇಂಡಿಯಾ ಎಕ್ಸ್‍ಪ್ರೆಸ್‍ನ ಷೇರುಗಳನ್ನು 100ರಷ್ಟು ಮಾರಾಟ ಮಾಡಲಾಗುವುದು. ಜೊತೆಗೆ ಏರ್ ಇಂಡಿಯಾ ಸ್ಯಾಟ್ಸ್ , ಏರ್ ಪೋರ್ಟ್ ಸರ್ವೀಸ್ ಲಿಮಿಟೆಡ್‍ನ ಶೇ.50ರಷ್ಟು ಷೇರುಗಳನ್ನು ಮಾರಾಟ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.