* ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ ಅನ್ನು ರಚಿಸಲಾಗಿದೆ ಎಂದು ಲೋಕಸಭೆಯಲ್ಲಿ ಬುಧವಾರ ಪ್ರಕಟಿಸಿದರು. * 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ' ಎಂಬ ಹೆಸರಿನಲ್ಲಿ ಟ್ರಸ್ಟ್‌ ರಚಿಸಲಾಗಿದೆ * 'ಅಯೋಧ್ಯೆಯ ರಾಮ ಮಂದಿರದ ಅಭಿವೃದ್ಧಿಗೆ ನಾವು ಯೋಜನೆಯನ್ನು ಸಿದ್ಧಪಡಿಸಿದ್ದೇವೆ ಎಂದು ಸಚಿವ ಸಂಪುಟ ಸಭೆಯ ನಂತರ ಪ್ರಧಾನಿ ಘೋಷಿಸಿದರು. * ದೆಹಲಿಯ ಗ್ರೇಟರ್‌ ಕೈಲಾಶ್‌ನಲ್ಲಿ ಟ್ರಸ್ಟ್‌ ಕಚೇರಿ ಇರಲಿದೆ.