ಶನಿವಾರ, 08 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಕಲಬುರಗಿ ನುಡಿಜಾತ್ರೆಗೆ 6 ನಿರ್ಣಯಗಳೊಂದಿಗೆ ಅದ್ದೂರಿ ತೆರೆ
Authored by:
Basavaraj Halli
ಕಲಬುರಗಿ: ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ 85 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದ್ದು. ಸಾಹಿತ್ಯ ಸಮ್ಮೇಳನ ಕೊನೆಯ ದಿನ ಒಟ್ಟು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಸಮ್ಮೇಳನದಲ್ಲಿ ಕೊನೆಯ ದಿನ ತೆಗೆದುಕೊಳ್ಳಲಾಗಿರುವ ನಿರ್ಣಯಗಳು ಹೀಗಿದೆ-
* ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಕಡ್ಡಾಯ.
* ಕಲ್ಯಾಣ ಕರ್ನಾಟಕ ಐತಿಹಾಸಿಕ ತಾಣಗಳ ಅಭಿವೃದ್ಧಿ.
* 371(ಜೆ) ಕಲಂ ತಿದ್ದುಪಡಿಯ ಲೋಪದೋಷಗಳನ್ನು ಸರಿಪಡಿಸಬೇಕು, ಸಮರ್ಪಕ ಅನುಷ್ಠಾನ ಕ್ರಮ ಕೈಗೊಳ್ಳಬೇಕು.
* ಮಹಾಜನ್ ವರದಿಯಾ ಅಂತಿಮ, ಅದರ ಅನುಷ್ಠಾನಕ್ಕೆ ತಂದು ವಿವಾದ ಕೊನೆಗಾಣಿಸಲು ಆಗ್ರಹ
* ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹ.
* 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನ