ಗುರುವಾರ, 13 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಎಲ್ಲ ಕಾಲೇಜುಗಳಲ್ಲಿಯೂ ರಾಷ್ಟ್ರಗೀತೆ ಹಾಡುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ ಮಹಾರಾಷ್ರ್ಟ ಸರ್ಕಾರ
Authored by:
Basavaraj Halli
ಮಹಾರಾಷ್ಟ್ರ ರಾಜ್ಯದ ಎಲ್ಲ ಕಾಲೇಜುಗಳಲ್ಲಿಯೂ ದಿನಾಂಕ ಫೆಬ್ರುವರಿ 19 ರಿಂದ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತ ಮಾಹಿತಿಯನ್ನು ಸರ್ಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಮಂತ್ ಅವರು ಸುದ್ದಿಗಾರರೊಂದಿಗೆ ಹಂಚಿಕೊಂಡಿದ್ದಾರೆ.
ರಾಷ್ಟ್ರಗೀತೆಯನ್ನು ಪ್ಲೇ ಮಾಡುವುದು ಮತ್ತು ಹಾಡುವುದರಿಂದ ಯುವ ಸಮುದಾಯದಲ್ಲಿ ರಾಷ್ಟ್ರಾಭಿಮಾನ ಮೂಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.