ಸೋಮವಾರ, 17 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ದಿಲ್ಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಪ್ರಮಾಣವಚನ ಸ್ವೀಕಾರ
Authored by:
Siddaram Halli
ಆಮ್ ಆದ್ಮಿ ಪಕ್ಷ(AAP) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು 3ನೇ ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದಲ್ಲಿ AAP ಪಕ್ಷವು 62 ಸೀಟುಗಳಲ್ಲಿ ಜಯಸಾಧಿಸಿ ಬಹುಮತ ಪಡೆದಿತ್ತು. ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿಲ್ಲಿ ಲೆಫ್ಟಿನೆಂಟ್ ಕರ್ನಲ್ ಅನಿಲ್ ಬೈಜಾಲ್ ಅವರಿಂದ ಕೇಜ್ರಿವಾಲ್ ಪ್ರಮಾಣವಚನ ಸ್ವೀಕರಿಸಿದರು.
ಕೇಜ್ರಿವಾಲ್ ಜೊತೆಗೆ ಮನೀಷ್ ಸಿಸೋಡಿಯಾ, ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸತ್ಯೇಂದ್ರ ಜೈನ್, ರಾಜೇಂದ್ರ ಗೌತಮ್ ಹಾಗೂ ಇಮ್ರಾನ್ ಹುಸೈನ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.