ಮಂಗಳವಾರ, 25 ಫೆಬ್ರುವರಿ 2020
5:30 ಪೂರ್ವಾಹ್ನ
Daily PDF
ಬಂಡೀಪುರಕ್ಕೆ ಸಂದ "ಬೆಸ್ಟ್ ನ್ಯಾಷನಲ್ ಪಾರ್ಕ್" ಪ್ರಶಸ್ತಿ
Authored by:
Basavaraj Halli
ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ "ಬೆಸ್ಟ್ ನ್ಯಾಷನಲ್ ಪಾರ್ಕ್" ಎಂಬ ಪ್ರಶಸ್ತಿ ದೊರೆತಿದೆ. ಪ್ರತಿಷ್ಠಿತ ರಾಷ್ಟ್ರೀಯ ನಿಯತಕಾಲಿಕೆ ಔಟ್ ಲುಕ್ ಟ್ರಾವೆಲರ್ ಈ ಪ್ರಶಸ್ತಿಯನ್ನು ಘೋಷಿಸಿದೆ.
ಒಟ್ಟು ಇಪ್ಪತ್ತೈದು ವಿಭಾಗಗಳಲ್ಲಿ ಪ್ರಶಸ್ತಿ ನೀಡುತ್ತಿದ್ದು ಇವುಗಳ ಪೈಕಿ "ಬೆಸ್ಟ್ ನ್ಯಾಷನಲ್ ಪಾರ್ಕ್" ವಿಭಾಗದ ಪ್ರಶಸ್ತಿಯು ಬಂಡೀಪುರ ಅಭಯಾರಣ್ಯಕ್ಕೆ ದೊರೆತಿದೆ.
ಇತ್ತೀಚೆಗೆ ಡಿಸ್ಕವರಿ ಚಾನೆಲ್‌ನಲ್ಲಿ ಪ್ರಸಾರವಾಗುವ ಮ್ಯಾನ್ ವರ್ಸಸ್ ವೈಲ್ಡ್‌ನ(Man vs Wild) ವಿಶೇಷ ಸಂಚಿಕೆಗಾಗಿ ಸೂಪರ್ ಸ್ಟಾರ್ ರಜಿನಿಕಾಂತ್ ಹಾಗೂ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಬಂಡೀಪುರದಲ್ಲಿ ಚಿತ್ರಿಸಲಾಗಿದೆ ಎಂಬುದು ವಿಶೇಷ