ಬುಧವಾರ, 04 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕರೋನಾ ವೈರಸ್ ಜಾಗೃತಿಗಾಗಿ ಸಹಾಯವಾಣಿ ಆರಂಭಿಸಿದ ಕೇಂದ್ರ ಸರ್ಕಾರ
Authored by:
Basavaraj Halli
ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕರೋನಾ ವೈರಸ್ ಭಾರತಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತು ಭಾರತದಲ್ಲಿ ಕೆಲ ಪ್ರಕರಣಗಳಲ್ಲಿ ಈ ವೈರಸ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು (911123978046) ಆರಂಭಿಸಿದೆ
ವಿಶ್ವದ ವಿವಿಧ ದೇಶಗಳಲ್ಲಿ ಈಗಾಗಲೇ ಸಾವಿರಾರು ಜನರನ್ನು ಬಲಿ ಪಡೆದಿರುವ ಈ ವೈರಸ್ ಭಾರತದ ವಿವಿಧ ನಗರಗಳಲ್ಲಿ ಪತ್ತೆಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ಸಾರ್ವಜನಿಕರು ಈ ಸಂಖ್ಯೆಗೆ (911123978046) ಕರೆಮಾಡಿ ರೋಗ ಲಕ್ಷಣ, ಜಾಗೃತಿ, ಸಹಾಯ ಹಾಗೂ ತುರ್ತು ಸಹಾಯಕ್ಕಾಗಿ ಈ ಸಂಖ್ಯೆಯಿಂದ ಮಾಹಿತಿ ಪಡೆಯಬಹುದಾಗಿದೆ.