ಭಾರತದ ಪ್ರಧಾನಿ ಮೋದಿಯವರು ನೆರೆಯ ರಾಷ್ಟ್ರಗಳಾದ ಸಾರ್ಕ್ ದೇಶಗಳೊಂದಿಗೆ ಮಾರಕ ಕೊರೊನಾ ವೈರಸ್ ನಿಯಂತ್ರಣ ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದರು. ಈ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ಮಾಲ್ಡೀವ್ ಅಧ್ಯಕ್ಷ ಇಬ್ರಾಹಿಂ ಮುಹಮ್ಮದ್ ಸೊಲಿಹ್, ಶ್ರೀಲಂಕಾ ಪ್ರಧಾನ ಮಂತ್ರಿ ಗೊಟಬಯ ರಾಜಪಕ್ಷೆ, ಭೂತಾನ್ ಪ್ರಧಾನಿ ಲೋಟೆ ತ್ಶೆರಿಂಗ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ, ಪಾಕಿಸ್ತಾನದ ಪ್ರತಿನಿಧಿಯಾಗಿ ಡಾ. ಝಾಫರ್ ಮಿರ್ಜಾ ಅವರು ಭಾಗವಹಿಸಿದ್ದರು.