ಬುಧವಾರ, 18 ಮಾರ್ಚ್ 2020
5:30 ಪೂರ್ವಾಹ್ನ
Daily PDF
ತಪಾಸಣೆ ಸಾಮರ್ಥ್ಯ ಹೆಚ್ಚಿಸಲು ಎಲ್ಲ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಕರೆ
Authored by:
Basavaraj Halli
ಝೂರಿಕ್ (ಸ್ವಿಟ್ಸರ್‌ಲ್ಯಾಂಡ್): ಇಡೀ ವಿಶ್ವವನ್ನೇ ಮಾರಕವಾಗಿ ಕಾಡುತ್ತಿರುವ ಕೊರೋನವೈರಸ್
ಸೋಂಕು ತಡೆಗಟ್ಟಲು ಎಲ್ಲ ದೇಶಗಳು ತಪಾಸಣೆ ಸಾಮರ್ಥ್ಯವನ್ನು ಹೆಚ್ಚಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ) ಸೋಮವಾರ(16 ಮಾರ್ಚ್ 2020)ರಂದು ಎಲ್ಲ ದೇಶಗಳಿಗೆ ಆದೇಶಿಸಿದೆ. ಇದರಿಂದಾಗಿ ಈ ರೋಗದ ಸೋಂಕು ಹರಡುವುವಿಕೆಯನ್ನು ಆದಷ್ಟು ಕಡಿಮೆ ಮಾಡುವ ಅತ್ಯುತ್ತಮ ಮಾರ್ಗ ಇದಾಗಿದೆ ಎಂದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿದೇರ್ಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಜಿನೀವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರೆ ನೀಡಿದ್ದಾರೆ.