ಶುಕ್ರವಾರ, 20 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಮಾಹಿತಿಗಾಗಿ ನೂತನ ಸಹಾಯವಾಣಿ
Authored by:
Basavaraj Halli
ಬೆಂಗಳೂರು : ಕರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಮತ್ತು ಜನರ ಆತಂಕ ಹಾಗೂ ಮಾಹಿತಿಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ನೂತನ ಸಹಾಯವಾಣಿಯನ್ನು ಆರಂಭಿಸಿದೆ.
ನೂತನ ಆರಂಭಿಸಿರುವ ಸಹಾಯವಾಣಿ ಕುರಿತು ಬಿಬಿಎಂಪಿ ಆಯುಕ್ತರಾದ ಬಿ.ಎಚ್. ಅನಿಲ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೊರೊನಾ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದರೂ 080-46848600ಕ್ಕೆ ಕರೆ ಮಾಡಿ ಅಥವಾ ರಾಷ್ಟ್ರೀಯ ಸಹಾಯವಾಣಿ 1075 ರಾಜ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಿ ಮಾಹಿತಿ ಪಡಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.