ಗುರುವಾರ, 26 ಮಾರ್ಚ್ 2020
5:14 ಅಪರಾಹ್ನ
Daily PDF
ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ
Authored by:
Basavaraj Halli
ನವದೆಹಲಿ: ಕರೋನ ವೈರಸ್ ಬೀತಿಯಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ದಿಂದಾಗಿ ಕೇಂದ್ರ ಸರ್ಕಾರವು ತಾತ್ಕಾಲಿಕವಾಗಿ ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ ರದ್ದು ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ಲಾಕ್ ಡೌನ್ ಇರುವದರಿಂದ ದೇಶಗಳಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು ಈ ಸೇವೆಗಳು ಯಾವುದೇ ತೊಂದರೆಯಿಲ್ಲದೆ ಸಾರ್ವಜನಿಕರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.