ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಇನ್ನಿಲ್ಲ
Published by Basavaraj Halli
13 ಏಪ್ರಿಲ್ 2020
ಬೆಂಗಳೂರು : ಕೇಂದ್ರದ ಮಾಜಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡರು ಆದ ಶ್ರೀ ಎಂ.ವಿ.ರಾಜಶೇಖರನ್ ಅವರು ತಮ್ಮ 92 ವಯಸ್ಸಿನಲ್ಲಿ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತೀವ್ರ ಬಹು ಅಂಗಾಗ ವೈಪಲ್ಯದಿಂದ ಕೊನೆಯುಸಿರೆಳೆದರು.
* ಸರಳ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದ ಇವರು ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪರ ಅಳಿಯರಾಗಿದ್ದರು.
* ಡಾ.ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿಅಂಶ ಖಾತೆಯ ರಾಜ್ಯ ಸಚಿವರಾಗಿ ಅಧಿಕಾರ ನಡೆಸಿದ್ದರು.