ವಿಶ್ವ ಆರೋಗ್ಯ ಸಂಸ್ಥೆ ಆರ್ಥಿಕ ನೆರವು ಸ್ಥಗಿತಗೊಳಿಸಿದ ನಿಲ್ಲಿಸಿದ ಅಮೇರಿಕಾ
Published by Basavaraj Halli
15 ಏಪ್ರಿಲ್ 2020
ವಾಷಿಂಗ್ಟನ್ : ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ಸರ್ಕಾರ ನೀಡುತ್ತಿದ್ದ ಆರ್ಥಿಕ ನೆರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಗಿತಗೊಳಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವಂತಹ ಕಾಯಿಲೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಹೇಳಿಕೆ ಸುಳ್ಳಾಗಿತ್ತು ಹಾಗೂ ಚೀನಾ ದೇಶದ ಪರ ವಿಶ್ವ ಆರೋಗ್ಯ ಸಂಸ್ಥೆ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಟ್ರಂಪ್ ಇದೆ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದ್ದಾರೆ.
* ಅಮೆರಿಕವು ವಿಶ್ವ ಆರೋಗ್ಯ ಸಂಸ್ಥೆಗೆ ಸರಿಸುಮಾರು 400 ಮಿಲಿಯನ್ ಡಾಲರ್ ನೆರವು ನೀಡುತ್ತಾ ಬಂದಿದೆ.
* 2018-19ರ ಬಜೆಟ್‌ನಲ್ಲಿ 6 ಬಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವು ನೀಡಿತ್ತು.