ವಂದೇ ಭಾರತ್ ಮಿಷನ್ : ಮೇ 15 ರಿಂದ 2ನೇ ಹಂತದ ರಕ್ಷಣಾ ಕಾರ್ಯಾಚರಣೆ
Published by Basavaraj Halli
09 ಮೇ 2020
ನವದೆಹಲಿ : ಬಹುತೇಕ ರಾಷ್ಟ್ರಗಳಲ್ಲಿ ಕೋರೋಣ ಸೋಂಕಿನ ವಿರುದ್ಧ ಹೋರಾಡಲು ವಿಧಿಸಿರುವ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರವು "ವಂದೇ ಭಾರತ್ ಮಿಷನ್" ಹೆಸರಿನಲ್ಲಿ ಕೇಂದ್ರ ಸರ್ಕಾರ ಕಾರ್ಯಾಚರಣೆ ಕೈಗೊಂಡಿದೆ.
"ವಂದೇ ಭಾರತ್ ಮಿಷನ್" ಅಡಿಯಲ್ಲಿ ಗಲ್ಫ್ ರಾಷ್ಟ್ರಗಳು ಸೇರಿ ವಿವಿದೆಡೆ ಸಿಲುಕಿದ್ದ ನೂರಾರು ಪ್ರಯಾಣಿಕರನ್ನು ಯಶಸ್ವಿಯಾಗಿ ಭಾರತಕ್ಕೆ ಕರೆತರಲಾಗಿದೆ.
ದಿನಾಂಕ ಮೇ 15 ರಿಂದ ಎರಡನೇ ಹಂತದ ಕಾರ್ಯಾಚರಣೆ ಆರಂಭಿಸಲಿದ್ದು ವಿವಿಧ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆಯಲಿದೆ.