ಬ್ರಿಕ್ಸ್ ಬ್ಯಾಂಕಿನಿಂದ ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವು
Published by Basavaraj Halli
14 ಮೇ 2020
ಬ್ರಿಕ್ಸ್ ರಾಷ್ಟ್ರಗಳ ನ್ಯೂ ಡೆವೆಲಪ್ ಮೆಂಟ್ ಬ್ಯಾಂಕ್(NDB) ಭಾರತಕ್ಕೆ ಕೊರೊನಾವೈರಸ್ ವಿರುದ್ಧ ಹೋರಾಡಲು 1 ಶತಕೋಟಿ ಡಾಲರ್ (USD) ಅಂದರೆ ಸುಮಾರು 7,549 ಕೋಟಿ ರುಪಾಯಿಗಳ ಆರ್ಥಿಕ ನೆರವು ಘೋಷಿಸಿದೆ.
* ಶಾಂಘೈ ನಲ್ಲಿ ತನ್ನ ಕೇಂದ್ರ ಕಚೇರಿ ಹೊಂದಿರುವ ನ್ಯೂ ಡೆವೆಲಪ್ ಮೆಂಟ್ ಬ್ಯಾಂಕ್ ನ್ನು ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಒಟ್ಟಾಗಿ 2014ರಲ್ಲಿ ಸ್ಥಾಪಿಸಿದ್ದವು. ಈ ಬ್ಯಾಂಕ್ ನ ಮುಖ್ಯಸ್ಥರಾಗಿ ಭಾರತದ ಹಿರಿಯ ಬ್ಯಾಂಕ್ ಅಧಿಕಾರಿ ಕೆ ವಿ ಕಾಮತ್ ಸೇವೆ ಸಲ್ಲಿಸುತ್ತಿದ್ದಾರೆ.