ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ರಾಷ್ಟ್ರವಾಗಿ ಭಾರತ
Published by Basavaraj Halli
02 ಜೂನ್ 2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿಯಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಸುಮಾರು 200 ಮೊಬೈಲ್ ಫೋನ್ ತಯಾರಿಕಾ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಿಂದಾಗಿ ಅತಿ ಹೆಚ್ಚು ಮೊಬೈಲ್ ಫೋನುಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತವು ಇದೀಗ ಬಲಿಷ್ಠ ಮೊಬೈಲ್ ರಫ್ತು ರಾಷ್ಟ್ರವಾಗಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.