ಮೋದಿ ಸರ್ಕಾರದಿಂದ "ಒನ್ ನೇಷನ್ ಒನ್ ಮಾರ್ಕೆಟ್" ಯೋಜನೆ ಜಾರಿಗೆ ಚಿಂತನೆ
Published by Basavaraj Halli
04 ಜೂನ್ 2020
ನವದೆಹಲಿ: ಭಾರತೀಯ ಕೃಷಿಕರಿಗೆ ತಮ್ಮ ಬೆಳೆಗಳನ್ನು ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡಲು ಹಲವು ಬಗೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ರೈತರಿಗೆ ಅನುಕೂಲವಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ಜಾರಿಗೆ ತರಲು ಚಿಂತಿಸುತ್ತಿದ್ದು, ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ 'ಒನ್ ನೇಷನ್ ಒನ್ ಮಾರ್ಕೆಟ್' ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಈ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ದೇಶದ ರೈತರಿಗಾಗಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. 'ಒನ್ ನೇಷನ್ ಒನ್ ಮಾರ್ಕೆಟ್' ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿ ಎಲ್ಲಿ ಬೇಕಾದರೂ ಬೆಳೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ರೈತರೇ ಬೆಳೆಗಳಿಗೆ ದರ ನಿಗದಿ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.