ಕೊರೊನಾ ಪರಿಣಾಮದಿಂದ ಮುಂದಿನ ಒಂದು ವರ್ಷ ಹೊಸ ಯೋಜನೆಗಳಿಲ್ಲ -ಕೇಂದ್ರ ಸರ್ಕಾರ
Published by Siddaram Halli
06 ಜೂನ್ 2020
ನವದೆಹಲಿ : ದೇಶದಲ್ಲಿ ವ್ಯಾಪಿಸುತ್ತಿರುವ ಕೊರೊನಾ ವೈರಸ್ ನಿಂದಾಗಿ ಈಗಾಗಲೇ ದೇಶದ ಆರ್ಥಿಕತೆ ಮೇಲೆ ತೀವ್ರ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನಲೆಯಲ್ಲಿ ಮುಂದಿನ ಒಂದು ವರ್ಷ ಕಾಲ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಕ್ರೋಡೀಕರಿಸಬೇಕಿರುವದರಿಂದ ವಿತ್ತ ಸಚಿವಾಲಯವು ಈ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಕೇಂದ್ರದಿಂದ ಯಾವುದೇ ಹೊಸ ಯೋಜನೆಯನ್ನು ಘೋಷಣೆ ಮಾಡದಿರಲು ನಿರ್ಧರಿಸಲಾಗಿದೆ.