ತರಂಗ ವಾರಪತ್ರಿಕೆ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮಿಯವರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ
Published by Basavaraj Halli
07 ಜೂನ್ 2020
ಬೆಂಗಳೂರು: ಹಿರಿಯ ಪತ್ರಕರ್ತೆ, ತರಂಗ ವಾರಪತ್ರಿಕೆಯ ಸಂಪಾದಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಯು.ಬಿ.ರಾಜಲಕ್ಷ್ಮಿಯವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಡಾ. ಯು.ಬಿ. ರಾಜಲಕ್ಷ್ಮಿ ಕಳೆದ 37 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದು, 1987 ರಲ್ಲಿ ಉದಯವಾಣಿ ಪತ್ರಿಕೆಯ ಸೋದರ ವಾರ ಪತ್ರಿಕೆಯಾದ ತರಂಗ ವಾರಪತ್ರಿಕೆಯಲ್ಲಿ ತಮ್ಮ ಸೇವೆ ಆರಂಭಿಸಿ ಪ್ರಸ್ತುತ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
* ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪಡೆದು ಹಂಪಿ ವಿವಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.
* ಇವರ ಪ್ರತಿಕಾರಂಗದ ಸಾಧನೆಯನ್ನು ಪರಿಗಣಿಸಿ, ಖಾದ್ರಿ ಶಾಮಣ್ಣ ಟ್ರಸ್ಟ್ ಈ ವರ್ಷದ ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿರುತ್ತದೆ.