ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ನಿಧನ
Published by Basavaraj Halli
10 ಜೂನ್ 2020
ಭುವನೇಶ್ವರ್ : ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿಯವರು ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ದಿನಾಂಕ 08 June 2020 ರಂದು ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು.
* ಭದ್ರಾಕ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
* 2000-2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಎನ್ ಡಿ ಎ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿ ತಮ್ಮ ಸೇವೆ ನೀಡಿದ್ದಾರೆ.
* ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಸೇಥಿ ಮೃದು ಮಾತಿನ ವ್ಯಕ್ತಿತ್ವ ಉಳ್ಳವರಾಗಿದ್ದರು.