ರಾಜ್ಯಸಭೆಗೆ ಕರ್ನಾಟಕದ ಮೂರೂ ಪಕ್ಷಗಳ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ
Published by Basavaraj Halli
14 ಜೂನ್ 2020
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳ ಆಯ್ಕೆಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ರಾಜ್ಯದ ಮೂರೂ ಪ್ರಮುಖ ಪಕ್ಷಗಳ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಆಯ್ಕೆಯಾದವರ ವಿವರ ಈ ಕೆಳಗಿನಂತಿದೆ
* ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
* ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ
* ಬಿಜೆಪಿಯಿಂದ ಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ
ಈ ಎಲ್ಲ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯಾದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಿಸಿದ್ದಾರೆ.