ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜೂ.20 ರಂದು ಗರೀಬ್‌ ಕಲ್ಯಾಣ್‌ ರೋಜ್‌ಗಾರ್‌ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಈ ಯೋಜನೆಯು ಒಟ್ಟು 50 ಸಾವಿರ ಕೋಟಿ ರೂ. ಮೌಲ್ಯದ್ದಾಗಿದೆ. ಕೋರೋಣ ಭೀತಿಯಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‌ಡೌನ್‌ ಸಮಯದಲ್ಲಿ ತವರು ರಾಜ್ಯಗಳಿಗೆ ಮರಳಿರುವ ವಲಸೆ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಉದ್ಯೋಗ ಒದಗಿಸುವ ಮುಖ್ಯ ಉದ್ದೇಶದಿಂದ ಯೋಜನೆಯನ್ನು ಆರಂಭಿಸಲಾಗಿದ್ದು, ಒಟ್ಟು 6 ರಾಜ್ಯಗಳ ಕಾರ್ಮಿಕರಿಗೆ ಈ ಯೋಜನೆಯಿಂದ ನೆರವಾಗಲಿದೆ. * ಬಿಹಾರದ ಖಗಾರಿಯಾ ಜಿಲ್ಲೆಯ ತೆಲಿಹಾರ್‌ ಗ್ರಾಮದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಯೋಜನೆಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಒಟ್ಟು 125 ದಿನಗಳ ಬೃಹತ್‌ ಅಭಿಯಾನ ಇದಾಗಿದೆ. * ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್‌ ಮತ್ತು ಒಡಿಶಾ ರಾಜ್ಯದ 116 ಜಿಲ್ಲೆಗಳನ್ನು ಈ ಯೋಜನೆಗೆ ಆಯ್ಕೆಮಾಡಲಾಗಿದೆ