ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
Published by Basavaraj Halli
21 ಜೂನ್ 2020
ಪ್ರಧಾನಿ ನರೇಂದ್ರ ಮೋದಿಯವರು 2014 ರ ಸೆಪ್ಟೆಂಬರ್ 27ರಂದು ವಿಶ್ವಸಂಸ್ಥೆಯ ಮಹಾಧಿವೇಶನದ ತಮ್ಮ ಭಾಷಣದಲ್ಲಿ ಯೋಗ ದಿನ ಕುರಿತು ಪ್ರಸ್ತಾಪಿಸಿದ್ದರು. ಅದರಂತಯೇ ವಿಶ್ವಸಂಸ್ಥೆಯು ಜೂನ್ 21 ನ್ನು ಅಂತಾರಾಷ್ಟ್ರೀಯ ಯೋಗ ದಿನ ಅಥವಾ ವಿಶ್ವ ಯೋಗ ದಿನವೆಂದು ಘೊಷಿಸುವ ನಿರ್ಣಯವನ್ನು 2014 ರ ಡಿಸೆಂಬರ್ 11 ಕೈಗೊಂಡಿತು.
ಅದರಂತೆಯೇ ಪ್ರತಿ ವರ್ಷ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನ ಅಥವಾ ವಿಶ್ವ ಯೋಗ ದಿನವೆಂದು ಆಚರಿಸಲಾಗುತ್ತದೆ.
* * ಜಾಗತಿಕವಾಗಿ ವ್ಯಾಪಿಸಿರುವ ಕೊವಿಡ್-19 ಪರಿಣಾಮವಾಗಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಡಿಜಿಟಲ್ ಆಗಿರಲಿದ್ದು, ಡಿಜಿಟಲ್ ಮೀಡಿಯಾ ವೇದಿಕೆಗಳ ಮೂಲಕ ಯೋಗ ದಿನಾಚರಣೆ ನಡೆಯಲಿದೆ.
* ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶ ಕಾರ್ಯಕ್ರಮದ ಕೇಂದ್ರಬಿಂದುವಾಗಿರಲಿದೆ.
* ಈ ವರ್ಷದ ಘೋಷವಾಕ್ಯ : 'Yoga at Home and Yoga with Family'