ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಹೊಸ ತಾಲೂಕು ರಚನೆಯಾಗಲಿದ್ದು, ಕರ್ನಾಟಕ ಸರ್ಕಾರ ಪೊನ್ನಂಪೇಟೆ ತಾಲೂಕು ರಚನೆ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಈ ಮೊದಲು ತಾಲೂಕು ರಚನೆಗೆ ಕರ್ನಾಟಕ ಸರ್ಕಾರ ಕರಡು ಆದೇಶ ಪ್ರಕಟ ಮಾಡಿತ್ತು. ಆದರೆ ಯಾವುದೇ ಆಕ್ಷೇಪಣೆ ಬಾರದ ಹಿನ್ನಲೆ ಪ್ರಸ್ತುತ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಸರ್ಕಲ್ ಅನ್ನು ಹೊಸ ತಾಲೂಕು ಆಗಿ ರಚನೆ ಮಾಡಲು ಒಪ್ಪಿಗೆ ನೀಡಲಾಗಿದೆ. ಹಾಗೂ ಹೊಸ ತಾಲೂಕಿನ ವ್ಯಾಪ್ತಿಗೆ ಬರುವ ಹೋಬಳಿ, ಗ್ರಾಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.