ಪ್ರಧಾನಿ ಮೋದಿಯಿಂದ ಏಷ್ಯಾದ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಉದ್ಘಾಟನೆ
Published by Basavaraj Halli
10 ಜುಲೈ 2020
ರೇವಾ : ಭಾರತದ ಪ್ರಧಾನಿಯವರಾದ ನರೇಂದ್ರ ಮೋದಿಯವರು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿರ್ಮಿಸಿರುವ ಏಷ್ಯಾದ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕವನ್ನು ಉದ್ಘಾಟನೆ ಮಾಡಲಿದ್ದಾರೆ.
* ಈ ಘಟಕವು ಏಷ್ಯಾದಲ್ಲೇ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕವಾಗಿದೆ.
* 750 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿದ್ದು, ಅಮೆರಿಕದ ಕ್ಯಾಲಿಫೋರ್ನಿಯಾದ ಅತಿ ದೊಡ್ಡ ಸೋಲಾರ್ ಪ್ಲಾಂಟ್ನ ದಾಖಲೆ ಮುರಿದು ಹಾಕಲಿದೆ.
* ಈ ಘಟಕವು ಬರೋಬ್ಬರಿ 3,700 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದ್ದು, ಇದಕ್ಕಾಗಿ 4,500 ಕೋಟಿ ರೂ ವೆಚ್ಚ ಮಾಡಲಾಗಿದೆ.