ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ
Published by Basavaraj Halli
16 ಜುಲೈ 2020
ಬಳ್ಳಾರಿ : ಹಿರಿಯ ರಂಗಭೂಮಿ ಕಲಾವಿದೆ, ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ಬಳ್ಳಾರಿಯ ನಗರದ ತನ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸತತ 50 ವರ್ಷಗಳ ಕಾಲ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿರುವ ಇವರು ತಮ್ಮ 27ನೇ ವಯಸ್ಸಿಗೆ ರಂಗಭೂಮಿ ಪ್ರವೇಶಿಸಿದ್ದರು. ಕುಂತಿ, ಗಾಂಧಾರಿ, ದ್ರೌಪದಿ, ಉತ್ತರೆ, ಸೀತೆ ಸೇರಿ ಹಲವು ಪಾತ್ರಗಳ ಮೂಲಕ ಜನಮನ ಸೆಳೆದಿದ್ದರು.
ಬಳ್ಳಾರಿ ಸುಭದ್ರಮ್ಮ ಅವರು 2000ಕ್ಕೂ ಹೆಚ್ಚು ನಾಟಕ ಪ್ರದರ್ಶನಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಬಳ್ಳಾರಿ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್, ನಾಟಕ ಅಕಾಡೆಮಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಹಂಪಿ ವಿವಿ ಕೊಡಮಾಡುವ ನಾಡೋಜ ಗೌರವ ಸೇರಿ ಹಲವು ಗೌರವ ಪುರಸ್ಕಾರಗಳನ್ನು ಪಡೆದಿದ್ದಾರೆ.