ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO)ಗಳಿಗೆ ಜನನ- ಮರಣ ಪ್ರಮಾಣ ಪತ್ರ ನೀಡುವ ಅಧಿಕಾರ ನೀಡಿದ ರಾಜ್ಯ ಸರ್ಕಾರ
Published by Basavaraj Halli
19 ಜುಲೈ 2020
ಬೆಂಗಳೂರು:ಕರ್ನಾಟಕ ರಾಜ್ಯದಲ್ಲಿ ಈವರೆಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಧಿಕಾರ ಇರುತ್ತಿರಲಿಲ್ಲ, ಆದರೆ ಸರ್ಕಾರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ನೀಡಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಜನನ ಮತ್ತು ಮರಣ ಕಾಯ್ದೆ 1969ರ ಅನ್ವಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ( ಪಿಡಿಓ) ಇ ಜನ್ಮ ತಂತ್ರಾಂಶದಲ್ಲಿ ತಮ್ಮ ಡಿಜಿಟಲ್ ಸಹಿಯ ಮುಖಾಂತರ ವ್ಯಕ್ತಿಗಳ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.