* ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಲೂಸಾನ್ ನಲ್ಲಿ ನಡೆದ ಡೈಮಂಡ್ ಲೀಗ್ ನಲ್ಲಿ 87.66 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
* ನೀರಜ್ ಚೋಪ್ರಾ ಇದೇ ಮೇ 5ರಂದು ದೋಹಾದಲ್ಲಿ ನಡೆದಿದ್ದ ಡೈಮಂಡ್ ಲೀಗ್‌ನಲ್ಲಿ(Diamond League) ಚಿನ್ನದ ಪದಕ ಗೆದ್ದಿದ್ದರು. ಈ ಕೂಟದಲ್ಲಿ ಅವರು ತಮ್ಮ 4ನೇ ಅತ್ಯುತ್ತಮ ದೂರದ(88.67 ಮೀ.) ಸಾಧನೆಯೊಂದಿಗೆ ಗುರುತಿಸಿಕೊಂಡಿದ್ದರು.
* ಜರ್ಮನಿಯ ಜುಲಿಯನ್ ವೆಬರ್ ಅವರು 87.03 ಮೀಟರ್ ದೂರ ಜಾವೆಲಿನ್ ಎಸೆದು ನೀರಜ್ ಚೋಪ್ರಾ ಪ್ರಬಲ ಪೈಪೋಟಿ ನೀಡಿದರು. ಆದರೂ ಅವರಿಂದ ಭಾರತೀಯ ಜಾವೆಲಿನ್ ಪಟುವನ್ನು ಹಿಂದಿಕ್ಕಲು ಸಾಧ್ಯವಾಗಲಿಲ್ಲ.
* ಜರ್ಮನಿಯ ಜುಲಿಯನ್ ವೆಬರ್ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.
ಸೋಮವಾರ, 03 ಜುಲೈ 2023
10:45 ಪೂರ್ವಾಹ್ನ
Daily PDF
ಡೈಮಂಡ್ ಲೀಗ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ
Authored by:
Yallamma G