* ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
* ಇತ್ತೀಚಿಗೆ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧಿಕಾರಿಗಳ ಸಭೆ ನಡಿಸಿದ್ದು, ಅಧಿವೇಶನಕ್ಕೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದರು.
* ಅಧಿವೇಶನ ಕರೆಯುವ ಕುರಿತು ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರಿಗೆ ಕಡತ ರವಾನಿಸಲಾಗಿದೆ.
* 1924ರ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ನಡೆದಿದ್ದ 39ನೇ ಕಾಂಗ್ರೆಸ್ ಅಧಿವೇಶನ ಉದ್ದೇಶಿಸಿ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು.
* ಈ ಕಾರ್ಯಕ್ರಮ ನಡೆದು 100ವರ್ಷ ಪೂರೈಸಿರುವ ಕಾರಣ ಇದೇ ಡಿ.26 ಮತ್ತು 27ರಂದು ಬೆಳಗಾವಿಯಲ್ಲೇ ಕಾಂಗ್ರೆಸ್ ಅಧಿವೇಶನ ನಡೆಸಲು ಕೂಡ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಡಿ.9 ರಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ
Published by Jyoti Angadi
18 ನವೆಂಬರ್ 2024