* 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡುವೆಯೇ, ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗಿರುವ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಗಳನ್ನು ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ.
* ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ ಮತ್ತು ಹೊಸದಾಗಿ ನಿರ್ಮಿಸಲಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.
* ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡುವ ಸಂದರ್ಭದಲ್ಲಿ 3,284.60 ಕೋಟಿ ಮೌಲ್ಯದ 29 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
* ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜನವರಿ 6 ರಿಂದ ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳ ಹಾರಾಟಕ್ಕೆ ಚಾಲನೆ ದೊರೆಯಲಿದೆ.
* ಡಿಸೆಂಬರ್ 30 ರಂದು ಅಯೋಧ್ಯೆ ವಿಮಾನ ನಿಲ್ದಾಣವನ್ನು ಉದ್ಘಾಟಿಸಲ್ಲಿರುವ ಪ್ರಧಾನಿ ಮೋದಿ 3 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಘೋಷಿಸಲಿದ್ದಾರೆ.
* ಡಿಸೆಂಬರ್ 22 ರಂದು ಏರ್‌ಬಸ್ ಎ320 ವಿಮಾನವನ್ನು ಪ್ರಾಯೋಗಿಕ ವಾಗಿ ಸುರಕ್ಷಿತ ಲ್ಯಾಂಡಿಂಗ್ ಮಾಡಲಾಗಿತ್ತು.
ಮಂಗಳವಾರ, 26 ಡಿಸೆಂಬರ್ 2023
10:50 ಪೂರ್ವಾಹ್ನ
Daily PDF
ಡಿಸೆಂಬರ್ 30 ರಂದು ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
Authored by:
Yallamma G