➤ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಡಿಸೆಂಬರ್ 2025 ರ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗಳನ್ನು ಘೋಷಿಸಿದ್ದು, ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ ಮತ್ತು ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
➤ ಐಸಿಸಿ ಮಹಿಳಾ ತಿಂಗಳ ಆಟಗಾರ: ಲಾರಾ ವೊಲ್ವಾರ್ಡ್ (ದಕ್ಷಿಣ ಆಫ್ರಿಕಾ) : ಐರ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೊಲ್ವಾರ್ಡ್ ಈ ಪ್ರಶಸ್ತಿ ಗೆದ್ದಿದ್ದಾರೆ. ಟಿ20 ಸರಣಿಯಲ್ಲಿ ಅಜೇಯ 115 ರನ್ ಸೇರಿದಂತೆ ಒಟ್ಟು 137 ರನ್ ಗಳಿಸಿದರು.ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು (124 ಮತ್ತು ಅಜೇಯ 100) ಬಾರಿಸುವ ಮೂಲಕ 127.50 ರ ಸರಾಸರಿಯಲ್ಲಿ 255 ರನ್ ಕಲೆಹಾಕಿದರು. ಇದು ಮೂರು ತಿಂಗಳ ಅವಧಿಯಲ್ಲಿ ಅವರು ಪಡೆಯುತ್ತಿರುವ ಎರಡನೇ ಪ್ರಶಸ್ತಿಯಾಗಿದೆ.
➤ ಐಸಿಸಿ ಪುರುಷರ ತಿಂಗಳ ಆಟಗಾರ: ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ): ಇಂಗ್ಲೆಂಡ್ ವಿರುದ್ಧದ ಆಶಸ್ (Ashes) ಸರಣಿಯಲ್ಲಿ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಈ ಗೌರವಕ್ಕೆ ಭಾಜನರಾಗಿದ್ದಾರೆ. ಡಿಸೆಂಬರ್ ತಿಂಗಳಿನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಸ್ಟಾರ್ಕ್ ಒಟ್ಟು 16 ವಿಕೆಟ್‌ಗಳನ್ನು ಕಬಳಿಸಿದರು. ಪರ್ತ್ ಟೆಸ್ಟ್‌ನಲ್ಲಿ 10 ವಿಕೆಟ್ ಹಾಗೂ ಬ್ರಿಸ್ಬೇನ್ ಟೆಸ್ಟ್‌ನಲ್ಲಿ 8 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ 4-1 ಅಂತರದಲ್ಲಿ ಸರಣಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದರು. ಸರಣಿಯುದ್ದಕ್ಕೂ 31 ವಿಕೆಟ್ ಪಡೆದ ಇವರು 'ಸರಣಿ ಶ್ರೇಷ್ಠ' ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಡಿಸೆಂಬರ್ ತಿಂಗಳ ಐಸಿಸಿ ಕ್ರಿಕೆಟ್ ತಾರೆಗಳಾಗಿ ಲಾರಾ ವೊಲ್ವಾರ್ಡ್ ಮತ್ತು ಮಿಚೆಲ್ ಸ್ಟಾರ್ಕ್ ಆಯ್ಕೆ.
Published by Akshata Halli
17 ಜನವರಿ 2026