* ಪ್ರಧಾನಿ ನರೇಂದ್ರ ಮೋದಿ ಇಂದು (ಜುಲೈ 25, 2025) ಪ್ರಧಾನಿಯಾಗಿ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ.
* ಇದರೊಂದಿಗೆ ಅವರು ಇಂದಿರಾ ಗಾಂಧಿಯ 4,077 ದಿನಗಳ ಸೇವೆಯ ದಾಖಲೆಯನ್ನು ಮುರಿದು, ಭಾರತದ ಇತಿಹಾಸದಲ್ಲಿಯೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
* ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ 16 ವರ್ಷ 286 ದಿನಗಳ ಕಾಲ ಪ್ರಧಾನಿಯಾಗಿದ್ದು, ಇವರ ದಾಖಲೆ ಇನ್ನೂ ಅಪ್ರಾಪ್ಯವಾಗಿದೆ. ಆದರೆ ಮೋದಿ, ಸತತ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
* ಸ್ವಾತಂತ್ರ್ಯ ನಂತರ ಜನಿಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ, ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ಪ್ರಧಾನಿ ಮಾತ್ರವಲ್ಲದೆ, ಎರಡು ಅವಧಿಗಳನ್ನು ಪೂರ್ಣಗೊಳಿಸಿದ ಏಕೈಕ ಕಾಂಗ್ರೆಸ್ಸೇತರ ನಾಯಕವೂ ಹೌದು.
* ಮೋದಿ ಅವರು 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ರಾಜಕೀಯದ ಶಿಖರಕ್ಕೇರಿದರು. 2002, 2007, 2012ರ ವಿಧಾನಸಭಾ ಚುನಾವಣೆಗಳ ಜೊತೆಗೆ 2014, 2019 ಹಾಗೂ 2024ರ ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿ ಸತತ ಆರು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ ಏಕೈಕ ನಾಯಕ ಎನಿಸಿಕೊಂಡಿದ್ದಾರೆ.
ದೇಶದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ನರೇಂದ್ರ ಮೋದಿ
Published by Jyoti Angadi
25 ಜುಲೈ 2025