* ಸೈಬರ್ ಅಪರಾಧಗಳ ವಿರುದ್ಧ ಪರಿಣಾಮಕಾರಿ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಪ್ರತ್ಯೇಕ ಸೈಬರ್ ತನಿಖಾ ಘಟಕವನ್ನು ಸ್ಥಾಪಿಸಿದೆ.
* ಘಟಕದ ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕವಾಗಿದ್ದು, ಮುಖ್ಯಸ್ಥರಾಗಿ ಪ್ರಣವ್ ಮೊಹಂತಿಗೆ ಹೊಣೆಗಾರಿಕೆ ನೀಡಲಾಗಿದೆ. ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಪ್ರಸ್ತಾವನೆ ಮೇರೆಗೆ ಈ ಘಟಕ ಆರಂಭವಾಗಿದೆ.
* ಘಟಕದ ಸ್ಥಾಪನೆಗೆ ಪೊಲೀಸ್ ಇಲಾಖೆ 372 ಕೋಟಿ ಅನುದಾನವನ್ನು ಕೋರಿದ್ದು, ಪ್ರಾಥಮಿಕ ಹಂತದಲ್ಲಿ ಸರ್ಕಾರ 5 ಕೋಟಿ ಬಿಡುಗಡೆ ಮಾಡಿದೆ. ಈ ಮೊತ್ತವನ್ನು ಸೈಬರ್ ಲ್ಯಾಬ್ ಹಾಗೂ ತಾಂತ್ರಿಕ ಉಪಕರಣಗಳ ಖರೀದಿಗೆ ಬಳಸಲಾಗುತ್ತದೆ.
* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಪೊಲೀಸ್ ಧ್ವಜ ದಿನಾಚರಣೆ’ ವೇಳೆ ಮಾತನಾಡಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯು ಹೂಡಿಕೆ, ಉದ್ಯೋಗ ಸೃಷ್ಟಿಗೆ ಆಧಾರವಾಗಿದ್ದು, ಪೊಲೀಸ್ ಇಲಾಖೆ ಸಮಾಜದಲ್ಲಿ ನೆಮ್ಮದಿ ನಿರ್ಮಿಸಲು ಮಹತ್ವದ ಪಾತ್ರ ವಹಿಸಬೇಕು ಎಂದರು.
ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಪ್ರತ್ಯೇಕ ‘ಸೈಬರ್ ತನಿಖಾ ಘಟಕ’ ಆರಂಭ
Published by Jyoti Angadi
09 ಏಪ್ರಿಲ್ 2025