* ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
* ಇನ್ನೆರಡು ದಿನಗಳಲ್ಲಿ ರಾಜೀನಾಮೆ ಸಲ್ಲಿಸಿ ಚುನಾವಣೆಗೆ ಹೋಗುವುದಾಗಿ ಅವರು ತಿಳಿಸಿದ್ದಾರೆ. ದೆಹಲಿ ಸರ್ಕಾರದ ಅಬಕಾರಿ ನೀತಿ ಪರಿಷ್ಕರಣೆ ಕೇಸ್ ನಲ್ಲಿ ಅವರು ಮಾರ್ಚ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು.
* ಇದೇ ವಾರ ಅವರು ಜಾಮೀನಿನ ಮೇರೆಗೆ ದೆಹಲಿ ಜೈಲಿನಿಂದ ಹೊರಬಂದಿದ್ದರು. ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಅವರು ತಿಳಿಸಿದ್ದಾರೆ.
* ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಎರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡುವ ಕುರಿತು ಘೋಷಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್
Published by Jyoti Angadi
16 ಸೆಪ್ಟೆಂಬರ್ 2024