* 'ಎಜುಕೇಟ್ ಗರ್ಲ್ಪ್' ಸಂಸ್ಥೆಯ ಸ್ಥಾಪಕಿ ದೆಹಲಿಯ ಸಫೀನಾ ಹುಸೇನರಿಗೆ ಪ್ರತಿಷ್ಠಿತ 'ವೈಸ್' (ವರ್ಲ್ಡ್ ಇನ್ನೋವೇಶನ್ ಸಮ್ಮಿಟ್ ಫಾರ್ ಎಜುಕೇಷನ್) ಪ್ರಶಸ್ತಿ ಲಭಿಸಿದೆ.
* ಭಾರತದ ವಿವಿಧ ಗ್ರಾಮಗಳಲ್ಲಿ ಶಾಲೆಯಿಂದ ಹೊರಗುಳಿದಿದ್ದ ಸುಮಾರು 14 ಲಕ್ಷ ಬಾಲಕಿಯರನ್ನು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವುದರಲ್ಲಿ ಮಾಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
* ಕತಾರ್ ಫೌಂಡೇಷನ್ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ಪ್ರಶಸ್ತಿಯು 4.16 ಕೋಟಿ (5 ಲಕ್ಷ ಡಾಲರ್) ಒಳಗೊಂಡಿದ್ದು. ದೋಹಾದಲ್ಲಿ ನಡೆದ 'ವೈಸ್‌ನ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
* ಸಫೀನಾ ಈ ಪ್ರಶಸ್ತಿಗೆ ಆಯ್ಕೆಯಾದ ಎರಡನೇ ಭಾರತೀಯರು. ಹಿಂದೆ, ನಿರ್ಲಕ್ಷಿತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಕಾರ್ಯಕ್ರಮಕ್ಕಾಗಿ 'ಪ್ರಥಮ್' ಸಹ ಸ್ಥಾಪಕ ಮಾಧವ್ ಚವಾಣ್ ಅವರಿಗೆ 2012ರಲ್ಲಿ ಈ ಪ್ರಶಸ್ತಿಗೆ ಭಾಜನರಾಗಿದ್ದರು.
* 16 ವರ್ಷಗಳ ಹಿಂದೆ 'ಎಜುಕೇಟ್ ಗರ್ಲ್ಸ್ ಸಂಸ್ಥೆ ಸ್ಥಾಪಿಸಿದೆ. ಆಗಿನ್ನೂ 'ಬೇಟಿ ಬಚಾವೊ, ಬೇಟಿ ಪಡಾವೊ' ಇರಲಿಲ್ಲ. ಶಿಕ್ಷಣ ವಂಚಿತ ಬಾಲಕಿಯರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವುದೇ ಉದ್ದೇಶವಾಗಿತ್ತು' ಎಂದು ಸಫೀನಾ ಅವರು ತಿಳಿಸಿದರು.
ದೆಹಲಿಯ ಸಫೀನಾ ಹುಸೇನರಿಗೆ 4.16 ಕೋಟಿಯ 'ವೈಸ್' ಪ್ರಶಸ್ತಿ ಪ್ರಧಾನ
Published by Bhagya R K
04 ಡಿಸೆಂಬರ್ 2023