* ಭಾರತೀಯ ಚುನಾವಣಾ ಆಯೋಗವು ಜಮ್ಮು & ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗೆ ಆಗಸ್ಟ್ 16 ರಂದು ವೇಳಾಪಟ್ಟಿ ಪ್ರಕಟಿಸಿದೆ.
* ಜಮ್ಮು & ಕಾಶ್ಮೀರದ 90 ಕ್ಷೇತ್ರಗಳಿಗೆ ಸೆಪ್ಟೆಂಬರ್ 18ರಂದು, ಸೆಪ್ಟೆಂಬರ್ 25, ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಘೋಷಣೆ ಮಾಡಿದೆ. ಇನ್ನು ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದೆ.
* ಜಮ್ಮು & ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಜಮ್ಮು ಕಾಶ್ಮೀರ ರಾಜ್ಯವನ್ನು 2019ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಲಾದ ಬಳಿಕ ಸರ್ಕಾರ ರಚನೆಗೆ ಮೊದಲಬಾರಿಗೆ ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ.
* 2.1 ಕೋಟಿ ಮತದಾರರು ಇರುವ ಹರಿಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
* ಜಮ್ಮು-ಕಾಶ್ಮೀರಾದಲ್ಲಿ ಒಟ್ಟು 87.09 ಲಕ್ಷ ಜನ ಮತದಾರರಿದ್ದರೆ, ಮತಗಟ್ಟೆಗಳ ಸಂಖ್ಯೆ 11,838 ಇವೆ. 3.71 ಲಕ್ಷ ಜನ ಮೊದಲ ಬಾರಿ ಮತದಾನ ಮಾಡುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 24, ಎರಡನೇ ಹಂತದಲ್ಲಿ 26 ಹಾಗೂ ಮೂರನೇ ಹಂತದಲ್ಲಿ 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ದಶಕಗಳ ಬಳಿಕ ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ; ಹರಿಯಾಣಕ್ಕೂ ವೇಳಾಪಟ್ಟಿ ಪ್ರಕಟ
Published by Jyoti Angadi
17 ಆಗಸ್ಟ್ 2024