* ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಂದಿನ ವಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಉತ್ತರಾಖಂಡ ಸಜ್ಜಾಗಿದೆ.
* ನ್ಯಾಯಮೂರ್ತಿ (ನಿವೃತ್ತ) ರಂಜನಾ ದೇಸಾಯಿ ಅವರ ನೇತೃತ್ವದಲ್ಲಿ ರಚಿಸಲಾದ ಸಮಿತಿಯು ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಸಲಿದೆ.
* ಗೋವಾದಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದ್ದು, ಕೇಂದ್ರಾಡಳಿತ ಪ್ರದೇಶವಾಗಿದ್ದ ಕಾಲದಲ್ಲಿಯೇ ಗೋವಾದಲ್ಲಿ (Goa) ಫ್ರೆಂಚ್ ಮಾದರಿಯ ನಾಗರಿಕ ಸಂಹಿತೆ ಜಾರಿಯಲ್ಲಿದೆ.
* ಈ ಮಸೂದೆಯನ್ನು ಕಾನೂನಾಗಿ ಪರಿವರ್ತಿಸಿದ ನಂತರ, ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಇದು ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ.
* ವಿವಾಹ ನೋಂದಣಿ, ವಿಚ್ಛೇದನ, ಆಸ್ತಿ ಹಕ್ಕುಗಳು, ಅಂತರ-ರಾಜ್ಯ ಆಸ್ತಿ ಹಕ್ಕುಗಳು, ನಿರ್ವಹಣೆ, ಮಕ್ಕಳ ಪಾಲನೆ ಮುಂತಾದ ವೈಯಕ್ತಿಕ ಕಾನೂನುಗಳಲ್ಲಿ ಏಕರೂಪತೆಯ ಮೇಲೆ ಮಸೂದೆ ವಿಶಾಲ ಗಮನವನ್ನು ಹೊಂದಿದೆ.
* ಉತ್ತರಾಖಂಡದಂತೆ, ಗುಜರಾತ್‌ನಲ್ಲಿ ಕೂಡ 2024ರಲ್ಲಿ ಲೋಕಸಭಾ ಚುನಾವಣೆಯ ಮೊದಲು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಸಾಧ್ಯತೆ ಇದ್ದು, ಒಂದು ವೇಳೆ ನೀತಿ ಜಾರಿಗೆ ತಂದರೆ ಗುಜರಾತ್ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆಗೊಳಿಸಿದ 2ನೇ ರಾಜ್ಯವಾಗಲಿದೆ.
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ಸಜ್ಜಾದ ಉತ್ತರಾಖಂಡ
Published by Bhagya R K
12 ನವೆಂಬರ್ 2023