* '1965 ಏಪ್ರಿಲ್ 2 ರಂದು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೆ ಬಂದಿದ್ದು, ಈ ದಿನವನ್ನು ಪೊಲೀಸ್ ಧ್ವಜ ದಿನಾಚಾರಣೆಯನ್ನಾಗಿ ಆಚರಿಸಲಾಗುತ್ತದೆ. ಅಲ್ಲದೆ ಈ ದಿನವನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಕೂಡ ಆಚರಿಸಲಾಗುತ್ತದೆ.
* ಈ ವಿಶೇಷ ಪೊಲೀಸ್ ಧ್ವಜ ದಿನದಂದು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ನೆನಸಿ ಅವರ ಕಲ್ಯಾಣದ ಕಡೆಗೆ ಚಿಂತಿಸಲಾಗುತ್ತದೆ.
* "ಕಾನೂನು ಸುವ್ಯವಸ್ಥೆ, ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ನಡುವೆ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗುತ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ, 02 ಎಪ್ರಿಲ್ 2025
12:09 ಅಪರಾಹ್ನ
Daily PDF
ಏಪ್ರಿಲ್ 2 : ಪೊಲೀಸ್ ಧ್ವಜ ದಿನಾಚರಣೆ
Authored by:
Yallamma G