* ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ, ಮಾಜಿ ಪ್ರಧಾನಿಗಳಾದ ದಿ. ಪಿ.ವಿ ನರಸಿಂಹರಾವ್,ಚೌಧರಿ ಚರಣ್ ಸಿಂಗ್, ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್ ಸ್ವಾಮಿನಾಥನ್ ಅವರಿಗೆ ಮಾರ್ಚ್ 30 ರಂದು ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.
* ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
* ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಪರವಾಗಿ ಪುತ್ರ ಪ್ರಭಾಕರ್ ರಾವ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಪರವಾಗಿ ಪುತ್ರ ಜೆಡಿಯು ನಾಯಕ ರಾಮನಾಥ್ ಠಾಕೂರ್ ಅವರು ಈ ಪ್ರಶಸ್ತಿ ಸ್ವೀಕರಿಸಿದರು.
* ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಪರವಾಗಿ ಪುತ್ರಿ ನಿತ್ಯಾ ರಾವ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
* ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪರವಾಗಿ ಮೊಮ್ಮಗ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
* 'ಈ ಮಹನೀಯರು ದೇಶಕ್ಕಾಗಿ ನೀಡಿದ ಸೇವೆಯನ್ನು ಪರಿಗಣಿಸಿ ಅತ್ಯುನ್ನತ ನಾಗರಿಕ ಗೌರವಕ್ಕೆ ಈ ಆಯ್ಕೆ ಮಾಡಲಾಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಶನಿವಾರ, 30 ಮಾರ್ಚ್ 2024
4:42 ಅಪರಾಹ್ನ
Daily PDF
ಎಲ್.ಕೆ. ಅಡ್ವಾಣಿ, ಕರ್ಪೂರಿ ಠಾಕೂರ್ ಸೇರಿ ಐವರಿಗೆ ‘ಭಾರತ ರತ್ನ’ ಪ್ರಧಾನ
Authored by:
Akshata Halli