* ಟೀಮ್ ಇಂಡಿಯಾ ಆಟಗಾರ ಮನೋಜ್ ತಿವಾರಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
* ಮನೋಜ್ ತಿವಾರಿಯವರು 2008 ರಲ್ಲಿ ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. 2008 ರಿಂದ ತಿವಾರಿಯವರು ಟೀಮ್ ಇಂಡಿಯಾ ಪರ 15 ಪಂದ್ಯಗಳನ್ನಾಡಿದ್ದಾರೆ.
* ಮನೋಜ ಅವರು ಸೋಷಿಯಲ್ ಮೀಡಿಯಾ ಮೂಲಕ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ.
* ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮನೋಜ್ ತಿವಾರಿ ಕೊಲ್ಕತ್ತಾ ನೈಟ್ ರೈಡರ್ಸ್​, ರೈಸಿಂಗ್ ಪುಣೆ ಸೂಪರ್​ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 98 ಪಂದ್ಯಗಳನ್ನಾಡಿರುವ ಅವರು ಒಟ್ಟು 1686 ರನ್​ ಬಾರಿಸಿದ್ದಾರೆ.