* ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅವ್ವ ಸೇವಾ ಟ್ರಸ್ಟ್ ನೀಡುವ ಪ್ರಸ್ತುತ ವರ್ಷದ 'ಅವ್ವ ಪ್ರಶಸ್ತಿ'ಗೆ ರಾಜಕಾರಣಿ ಎಸ್. ಆರ್. ಪಾಟೀಲ, ಪತ್ರಕರ್ತ ಚಂದ್ರಕಾಂತ ವಡ್ಡು, ಸೀತಾರ ವಾದಕ ಛೋಟೆ ರಹಮತ್‌ಖಾನ್‌ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಮಂದಿಯನ್ನು ಆಯ್ಕೆ ಮಾಡಲಾಗಿದೆ.
* ದೇಶಪಾಂಡೆ ನಗರದ ಗುಜರಾತ್‌ ಭವನದಲ್ಲಿ ನಡೆಯಲಿರು ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಟ್ರಸ್ಟ್‌ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. 
* ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯ​ಸ್ಮ​ರ​ಣೆ ಅಂಗವಾಗಿ ಅವ್ವ ಸೇವಾ ಟ್ರಸ್ಟ್‌ ವತಿಯಿಂದ ಡಿ. 15ರಂದು ಬೆಳಗ್ಗೆ 10.30ಕ್ಕೆ 12 ಸಾ​ಧ​ಕ​ರಿಗೆ ಅವ್ವ ಪ್ರಶಸ್ತಿ-2024 ಪ್ರದಾನ ಮಾಡಲಾಗುವುದು.
* ಹಿ​ರಿಯ ರಾ​ಜ​ಕಾ​ರಣಿ ಎ​ಸ್‌.​ಆ​ರ್‌. ​ಪಾ​ಟೀಲ, ಪ​ತ್ರ​ಕರ್ತ ಚಂದ್ರ​ಕಾಂತ ವಡ್ಡು, ಸಿ​ತಾರ ವಾ​ದಕ ಛೋಟೆ ರ​ಹ​ಮತ್‌ ಖಾ​ನ್‌, ಸಾಹಿತಿ ಸಂಗಮನಾಥ ಲೋಕಾಪುರ, ಗಾಯಕಿ ರೇಖಾ ಹೆಗಡೆ, ಭಾಗವತ ಕೇಶವ ಹೆಗಡೆ ಕೊಳಗಿ, ಉದ್ಯಮಿ ಮಹೇಂದ್ರ ಸಿಂಘಿ, ಬಸವ ತತ್ವ ಪ್ರಚಾರಕ ಎಸ್‌. ಮಹದೇವಯ್ಯ, ಸಮಾಜ ಸೇವಕಿ ರಾಜೇಶ್ವರಿ ಪಾಟೀಲ, ಜಾ​ನಪದ ಕಲಾವಿದ ಬಸವರಾಜ ಶಿಗ್ಗಾಂವಿ, ಸ್ಕೇ​ಟಿಂಗ್‌ ಕ್ರೀ​ಡಾ​ಪಟು ತ್ರಿಶಾ ಜಡಲಾ ಹಾಗೂ ಎಸ್ಸೆ​ಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಬಾಗಲಕೋಟೆಯ ಅಂಕಿತಾ ಕೊಣ್ಣೂರ ಅವ್ವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
* ಈ ಪ್ರಶಸ್ತಿಯು ಸ್ಮರಣಿಕೆ ಜೊತೆಗೆ ₹25 ಸಾವಿರ ನಗದು ಇರಲಿದೆ. ಸಮಾಜದಲ್ಲಿ ಅತ್ಯುತ್ತಮ ಸೇವೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಈವರೆಗೆ 68 ಮಂದಿಗೆ 'ಅವ್ವ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ'.
* ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಇ​ಳ​ಕಲ್‌ ಚಿತ್ತರಗಿಯ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವ​ಹಿ​ಸುವರು. ಡಿ​ಸಿಎಂ ಡಿ.ಕೆ. ಶಿವಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶಸ್ತಿ ಪ್ರದಾನ ಮಾಡುವರು. ಉಪನ್ಯಾಸಕಿ ಅಕ್ಷಯಾ ಗೋಖಲೆ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.