* ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಎಥೆನಾಲ್ ಉತ್ಪಾದಕ ಮತ್ತು ಗ್ರಾಹಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
* ಜೈವಿಕ ಇಂಧನಗಳ ಬಳಕೆಯನ್ನು ಉತ್ತೇಜಿಸಲು ಮತ್ತು ಇಂಧನ ಸುಸ್ಥಿರತೆಯನ್ನು ಸುಧಾರಿಸಲು ಭಾರತ ಸರ್ಕಾರವು ಕೈಗೊಂಡ ಕ್ರಮಗಳಿಂದಾಗಿ ಎಥಿನಾಲ್ ಉತ್ಪಾದನೆ ಮತ್ತು ಬಳಕೆ ಎರಡರಲ್ಲೂ ಹೆಚ್ಚಳವಾಗಿದೆ.
* ದೇಶದಲ್ಲಿ ಸಕ್ಕರೆ ಉತ್ಪಾದನೆ ಕುರಿತು ಮಾತನಾಡಿದ ಸಚಿವರು, ಕಳೆದ ದಶಕದಲ್ಲಿ ಕಬ್ಬು ಬೆಳೆಯುವುದು ಸುಮಾರು 18 ಪ್ರತಿಶತದಷ್ಟು ಹೆಚ್ಚಿದ್ದರೆ, ಕಬ್ಬು ಉತ್ಪಾದನೆಯು 40 ಪ್ರತಿಶತದಷ್ಟು ಹೆಚ್ಚಾಗಿದೆ.
* ಕಬ್ಬು ಬೆಳೆಯುವ ರೈತರಿಗೆ ಆರ್ಥಿಕ ನೆರವು ಸೇರಿದಂತೆ ಸರಕಾರವು ಹಲವಾರು ಉಪಕ್ರಮಗಳನ್ನು ಆರಂಭಿಸಿದೆ. ಈ ನೀತಿಗಳು ಇಂಧನಗಳೊಂದಿಗೆ ಮಿಶ್ರಣ ಮಾಡಲು ಹೆಚ್ಚು ಎಥೆನಾಲ್ ಲಭ್ಯವಾಗುವಂತೆ ಮಾಡಲು, ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ರೈತರಿಗೆ ಬೆಂಬಲ ನೀಡುತ್ತವೆ.
* ಹಸಿರು ಹೈಡ್ರೋಜನ್ ಉತ್ಪಾದನೆ, ಬಳಕೆ ಮತ್ತು ರಫ್ತಿಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಕಳೆದ ವರ್ಷ 19 ಸಾವಿರ 744 ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಶ್ರೀ ಜೋಶಿ ಹೇಳಿದರು.
ಎಥೆನಾಲ್ ಉತ್ಪಾದನೆಯಲ್ಲಿ ಭಾರತಕ್ಕೆ ಮೂರನೇ ಸ್ಥಾನ
Published by Jyoti Angadi
02 ಅಕ್ಟೋಬರ್ 2024