* ಗಾಜಾದಲ್ಲಿ ಭದ್ರತಾ ಮಂಡಳಿಯ ಸದಸ್ಯರು ಸೇರಿದಂತೆ ಅನೇಕ ರಾಷ್ಟ್ರಗಳ ಬೆಂಬಲದೊಂದಿಗೆ ಮಾನವೀಯ ನೆಲೆಯಲ್ಲಿ ತಕ್ಷಣ ಕದನ ವಿರಾಮ ಘೋಷಿಸುವ ಭದ್ರತಾ ಮಂಡಳಿಯ ನಿರ್ಣಯಕ್ಕೆ ಅಮೆರಿಕ ವಿಟೊ ಅಧಿಕಾರ ಚಲಾಯಿಸಿದೆ.
* ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 13 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಬ್ರಿಟನ್ ಮತದಾನದಿಂದ ದೂರ ಉಳಿದಿದೆ.
* ಅಕ್ಟೋಬರ್ .7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಸುಮಾರು 1,200 ಮಂದಿ ಮೃತಪಟ್ಟಿದ್ದರು. ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾ ಚರಣೆಯಲ್ಲಿ 17,400ಕ್ಕೂ ಹೆಚ್ಚು ಮಂದಿ ಸಾವಿಗೀಡಾ ಗಿದ್ದು, 40 ಸಾವಿರ ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಗಾಜಾದಲ್ಲಿ ವಿಟೊ ಅಧಿಕಾರ ಬಳಸಿದ ಅಮೆರಿಕಾ
Published by Bhagya R K
11 ಡಿಸೆಂಬರ್ 2023