* 2024ರ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
* ಭಾರತ ಸರ್ಕಾರವು ಯುಎಸ್ ಅಧ್ಯಕ್ಷ ಜೋ ಬಿಡನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು, ಆದರೆ ಅವರು ಜನೇವರಿಯಲ್ಲಿ ನವದೆಹಲಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಮ್ಯಾಕ್ರೋನ್ ಅವರಿಗೆ ಆಹ್ವಾನವನ್ನು ನೀಡಲಾಗಿದೆ.
* ಫ್ರೆಂಚ್ ನಾಯಕ 6ನೇ ಬಾರಿಗೆ ಮುಖ್ಯ ಅತಿಥಿ: ರಾಷ್ಟ್ರೀಯ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ಆಚರಣೆಯಲ್ಲಿ ಫ್ರೆಂಚ್ ನಾಯಕರೊಬ್ಬರು 6 ನೇ ಬಾರಿಗೆ ಮುಖ್ಯ ಅತಿಥಿಯಾಗಲಿದ್ದಾರೆ. ಮ್ಯಾಕ್ರನ್‌ಗೆ ಮೊದಲು ಮಾಜಿ ಫ್ರೆಂಚ್ ಪ್ರಧಾನಿ ಜಾಕ್ವೆಸ್ ಚಿರಾಕ್ ಅವರು 1976 ಮತ್ತು 1998 ರಲ್ಲಿ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು.
* ಮಾಜಿ ಅಧ್ಯಕ್ಷರಾದ ವ್ಯಾಲೆರಿ ಗಿಸ್ಕಾರ್ಡ್ ಡಿಎಸ್ಟೇಯಿಂಗ್, ನಿಕೋಲಸ್ ಸರ್ಕೋಜಿ ಮತ್ತು ಫ್ರಾಂಕೋಯಿಸ್ ಹೊಲಾಂಡ್ ಅವರು ಕ್ರಮವಾಗಿ 1980, 2008 ಮತ್ತು 2016 ವರ್ಷಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾರತದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದರು.
* `ಭಾರತ ಮತ್ತು ಫ್ರಾನ್ಸ್ ರಕ್ಷಣೆ, ಬಾಹ್ಯಾಕಾಶ, ನಾಗರಿಕ ಪರಮಾಣು, ವ್ಯಾಪಾರ, ಹೂಡಿಕೆ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿಕಟವಾಗಿ ಸಹಕರಿಸುತ್ತವೆ.
* 2023 ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಲ್ಲೆಲ್ ಫತ್ತಾಹ್ ಎಲ್ -ಸಿಸಿ ಅವರನ್ನು ಆಹ್ವಾನಿಸಲಾಗಿತ್ತು.
ಶನಿವಾರ, 23 ಡಿಸೆಂಬರ್ 2023
10:05 ಪೂರ್ವಾಹ್ನ
Daily PDF
ಗಣರಾಜ್ಯೋತ್ಸವದ ಮುಖ್ಯ ಅತಿಥಿ : ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಗೆ ಆಹ್ವಾನ
Authored by:
Yallamma G