* ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಪಕ್ಷ ಸಂಘಟನೆ ಉದ್ದೇಶದಿಂದ ಬೆಂಗಳೂರು ನಗರ ವ್ಯಾಪ್ತಿಯ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸುವ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ,
* ಬೆಂಗಳೂರು ಪೂರ್ವ ನಗರಪಾಲಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ,
* ಬೆಂಗಳೂರು ಪಶ್ಚಿಮಕ್ಕೆ ಸಚಿವ ಬೈರತಿ ಸುರೇಶ್
* ಬೆಂಗಳೂರು ಉತ್ತರಕ್ಕೆ ಸಚಿವ ಕೆ.ಜೆ. ಜಾರ್ಜ್
* ಬೆಂಗಳೂರು ದಕ್ಷಿಣಕ್ಕೆ ಸಚಿವ ರಾಮಲಿಂಗಾ ರೆಡ್ಡಿ
* ಬೆಂಗಳೂರು ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಜಮೀರ್ ಅಹಮದ್ ಖಾನ್ ಅವರನ್ನು ನೇಮಿಸಲಾಗಿದೆ.
* ಈ ಸಂಬಂಧ ಸಚಿವರಿಗೆ ಬರೆದ ಪತ್ರದಲ್ಲಿ, ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಅದರ ಭಾಗವಾಗಿ 5 ನಗರಪಾಲಿಕೆಗಳನ್ನು ವಿಂಗಡಿಸಿರುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
* ಮುಂಬರುವ ನಗರಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಉಸ್ತುವಾರಿ ಸಚಿವರು ತಮ್ಮ ಪಾಲಿಕೆಯ ವ್ಯಾಪ್ತಿಯ ಶಾಸಕರು, ಸಂಸದರು, ಮಾಜಿ ಸದಸ್ಯರು, ಪಕ್ಷದ ಘಟಕಗಳ ಅಧ್ಯಕ್ಷರು ಹಾಗೂ ಇತರ ಮುಖಂಡರೊಂದಿಗೆ ಚರ್ಚಿಸಿ ಪಕ್ಷ ಸಂಘಟನೆ ಬಲಪಡಿಸಿ ಯಶಸ್ಸು ಸಾಧಿಸುವಂತೆ ಸೂಚನೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಪಾಲಿಕೆಗಳ ಐದು ಉಸ್ತುವಾರಿ ಸಚಿವರ ನೇಮಕ
Published by Jyoti Angadi
11 ಸೆಪ್ಟೆಂಬರ್ 2025