* ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರು ದುಭಾಷಿಯ ನೆರವಿನಿಂದ ಸಾಂಕೇತಿಕ ಭಾಷೆ ಬಳಸಿ ವಾದ ಮಂಡಿಸುವ ಮೂಲಕ ಕರ್ನಾಟಕ ಹೈಕೋರ್ಟ್ ನಲ್ಲಿ ಸೋಮವಾರ (ಏಪ್ರಿಲ್ 8) ಇತಿಹಾಸ ಸೃಷ್ಟಿಸಿದ್ದಾರೆ.
* ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ ಕೌಟುಂಬಿಕ ವ್ಯಾಜ್ಯದ ಭಾಗವಾಗಿ ಪತಿಗೆ ಲುಕ್ ಔಟ್ (ಎಲ್‌ಒಸಿ) ನೋಟಿಸ್ ಜಾರಿಗೊಳಿಸಲಾಗಿತ್ತು. ಇದರ ರದ್ದತಿ ಕೋರಿ ಪತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ನ್ಯಾಯಾಲಯದಲ್ಲಿ ನಡೆಯಿತು. ಈ ಪ್ರಕರಣದಲ್ಲಿ ಸಾರಾ ಸನ್ನಿ ಪ್ರತಿವಾದಿಯಾಗಿರುವ ಪತ್ನಿಯ ಪರವಾಗಿ ವಾದಿಸಿದ್ದಾರೆ.
* ಕೆಲ ಕಾಲ ಸಂಜ್ಞೆಗಳ ಮೂಲಕ ವಿಷಯ ಮಂಡಿಸಿದ ಸಾರಾ ವಾದಿಸಿದರು. ನಂತರ ದುಭಾಷಿಯ ನೆರವಿನಿಂದ ಸಾರಾ ಸನ್ನಿ ವಿಸ್ತೃತವಾಗಿ ವಾದ ಮಂಡಿಸಿದರು. ಇದಕ್ಕೆ ಮೆಚ್ಚುಗೆ ಸೂಚಿಸಬೇಕಿದೆ. ದುಭಾಷಿಯ ನೆರವನಿಂದ ಸಾರಾ ಮಂಡಿಸಿದ ವಾದಕ್ಕೆ ಅಧಿಕೃತವಾಗಿ ಮೆಚ್ಚುಗೆ ಸೂಚಿಸಲಾಗಿದೆ ಎಂದು ಪೀಠವು ಹೇಳಿತು.
* ವಿಚಾರಣೆಯ ಕೊನೆಯ ಹಂತದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜರನಲ್ ಅರವಿಂದ ಕಾಮತ್ ಅವರು ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ವಾದ ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್ ಇತಿಹಾಸ ಸೃಷ್ಟಿಸಿದ್ದು, ಇಂಥ ವಕೀಲೆಯ ವಾದ ಆಲಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಾರಾ ಅವರು ಸಿಜೆಐ ಮುಂದೆ ವಾದಿಸಿದ್ದರು, ಆದರೆ, ಹೈಕೋರ್ಟ್‌ವೊಂದರಲ್ಲಿ ಇದೇ ಮೊದಲ ಬಾರಿಗೆ ವಾದಿಸಿದ್ದಾರೆ ಎಂದು ತಿಳಿಸಿದರು.
* ಏಪ್ರಿಲ್ 4ರಂದು ಪೀಠವು ಸಾರಾಗೆ ನೆರವಾಗಲು ಮಾಹಿತಿ ಮತ್ತು ತಂತ್ರಜ್ಞಾನದ ಸಚಿವಾಲಯದ ನೆರವಿನಿಂದ ದುಭಾಷಿ ಸಹಾಯ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿತ್ತು.
ಮಂಗಳವಾರ, 09 ಎಪ್ರಿಲ್ 2024
4:45 ಅಪರಾಹ್ನ
Daily PDF
ಹೈಕೋರ್ಟ್ ನಲ್ಲಿ ಇತಿಹಾಸ ಸೃಷ್ಟಿಸಿದ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ
Authored by:
Yallamma G